ಮೊಬೈಲ್ ಗಾಗಿ ಪ್ರಾಣ ಕಳೆದ 15 ರ ಬಾಲಕಿ

ಮಂಗಳೂರು: ಮೊಬೈಲ್ ಬಳಸಲು ಅನುಮತಿ ನೀಡದ್ದಕ್ಕೆ ಬೇಸರಗೊಂಡ 15 ವರ್ಷದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ.

ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ಮಾತನಾಡಿದ ಪೊಲೀಸ್‌ ಅಧಿಕಾರಿಯೊಬ್ಬರು ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಬಾಲಕಿಯ ಕುಟುಂಬಸ್ಥರು ಮೊಬೈಲ್‌ ನೋಡಿದ್ದು ಸಾಕೆಂದು ಆಕೆಯ ಮೊಬೈಲ್ ಅನ್ನು ಕಿತ್ತುಕೊಂಡಿದ್ದರಿಂದ ಬೇಸರಗೊಂಡು 7ನೇ ಮಹಡಿಯಿಂದ ಜಿಗಿದಿದ್ದಾಳೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. 

LEAVE A REPLY

Please enter your comment!
Please enter your name here