ಕೆಎಸ್ಆರ್ ಟಿ ಸಿ ಬಸ್ ಬೈಕ್ ಗೆ ಡಿಕ್ಕಿ- ಸವಾರ ಮೃತ್ಯು

ಮಂಗಳೂರು: ಕೆಎಸ್ಆರ್ ಟಿ ಸಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸರಪಾಡಿ ನಿವಾಸಿ ಅವಿವಾಹಿತ ಸೇಸಪ್ಪ ಯಾನೆ ಶ್ರೇಯಸ್ (30) ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಈತ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ. ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here