ಪೊಲೀಸರಿದ್ದಾರೆ…..ಎಚ್ಚರಿಕೆ. ನಂಬರ್‌ ಪ್ಲೇಟ್‌ ಸರಿ ಪಡಿಸಿಕೊಳ್ಳಿ

ಮಂಗಳೂರು: ನಂಬರ್ ಪ್ಲೇಟ್ ಅಳವಡಿಸದ ಮತ್ತು ನಿಯಮ ಮೀರಿದ ವಾಹನಗಳ ವಿರುದ್ದ ನಗರದಾದ್ಯಂತ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಕಾರ್ಯಾಚರಣೆ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ಯಾನ್ಸಿ ನಂಬರ್ ಪ್ಲೇಟ್, ಅಸಮರ್ಪಕ ನಂಬರ್ ಪ್ಲೇಟ್ ಗಳನ್ನು ವಶಪಡಿಸಿಕೊಡು, ಸುಮಾರು 87 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಿಯಮಗಳ ಪ್ರಕಾರವೇ ನೋಂದಣಿ ಫಲಕಗಳಲ್ಲಿ ನಿಗದಿತ ಅಳತೆಯ ಅಕ್ಷರಗಳು ಮತ್ತು ಅಂಕಿಗಳನ್ನು ಬರೆಸುವುದು ಕಡ್ಡಾಯವಾಗಿದೆ. ಆದರೆ, ಕೆಲವರು ನಂಬರ್‌ ಪ್ಲೇಟ್‌ಗಳಲ್ಲಿ ಮನಸೋ ಇಚ್ಛೆ ಸಂಘ-ಸಂಸ್ಥೆಗಳ ಹೆಸರು, ಲಾಂಛನ, ಚಿಹ್ನೆಗಳನ್ನು ಹಾಕಿಕೊಂಡು ನಿಯಮ ಉಲ್ಲಂಘಿಸುತ್ತಿದ್ದು, ಇಂತಹ ವಾಹನ ಮಾಲೀಕರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here