ಮಂಗಳೂರು: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೆರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ 2022ರಲ್ಲಿ ಮೂಡಿಗೆರೆ ಠಾಣೆಯಲ್ಲಿ ಶಿಲ್ಪ ವಿರುದ್ಧ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಶಿಲ್ಪ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದರಿಂದ ಬೇಸತ್ತು ಶಿಲ್ಪ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದು ಆಕೆಯನ್ನು ಸಮಾಧಾನಪಡಿಸಿದ್ದಾರೆ.