ಮಂಗಳೂರು (ಬೆಂಗಳೂರು): ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಏ.15 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿ ನೀಡಿದ್ದಾರೆ.
ಹುಬ್ಬಳ್ಳಿಯ ಕೇಶವಪುರದ ಮಧುರ ಕಾಲೋನಿಯಲ್ಲಿರುವ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಜೋಷಿ ಪಕ್ಷ ತೊರೆಯದಂತೆ ಶೆಟ್ಟರ್ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಟಿಕೆಟ್ ಘೋಷಿಸದಿದ್ದರೆ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ವರಿಷ್ಠರಿಗೆ ಗಡುವು ವಿಧಿಸಿದ್ದು ಅದರಂತೆ ಇಂದು ಅಭಿಮಾನಿಗಳ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ ತನ್ನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.