ಮಂಗಳೂರು ( ಹುಬ್ಬಳ್ಳಿ): ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ನೀಡದ ಹೈಕಮಾಂಡ್ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುನಿಸಿಕೊಂಡಿದ್ದಾರೆ.
ಕಳೆದ ರಾತ್ರಿ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಶೆಟ್ಟರ್ ಅವರ ಮನವೊಲಿಸಲು ಪ್ರಯತ್ನಿಸಿದ್ದು ವಿಫಲವಾಗಿದೆ. ನಾಯಕರು ಮನೆಯಿಂದ ತೆರಳಿದ ಬಳಿಕ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಇಂದು ಏ.16ರಂದು ಅಧಿಕೃತವಾಗಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ರಾಜೀನಾಮೆ ಬಳಿಕ ಮುಂದಿನ ನಡೆ ಕುರಿತು ಪ್ರಕಟಿಸುವುದಾಗಿಯೂ ಅವರು ಹೇಳಿದ್ದಾರೆ.