ಮಂಗಳೂರು (ಚಿಕ್ಕಮಗಳೂರು): ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರು ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಸಿಟಿ ರವಿ ಅವರನ್ನು ಸಭೆಯಿಂದ ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.