ಮಂಗಳೂರು ( ಹುಬ್ಬಳ್ಳಿ): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಮವಾರ ಬೆಳಿಗ್ಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಶೆಟ್ಟರ್ ಅವರನ್ನು ಬಿಜೆಪಿಯಲ್ಲಿ ಉಳಿಸಿಕೊಳ್ಳುವ ಕೊನೆ ಕ್ಷಣದ ಕಸರತ್ತು ಕಳೆದ ರಾತ್ರಿವರೆಗೂ ಮುಂದುವರಿದಿತ್ತು. ಆದರೆ ಶೆಟ್ಟರ್ ಬಿಜೆಪಿ ನಾಯಕರ ಫೋನ್ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ.