ಮಂಗಳೂರು (ಉಡುಪಿ): ರಾಜ್ಯದಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದು, ಪ್ರಚಾರದ ತೀವೃತೆ ಹೆಚ್ಚಿದೆ. ಈ ನಡುವೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೇ.4ರಂದು ಉಡುಪಿಗೆ ಭೇಟಿ ನೀಡಲಿದ್ದು, ಚುನಾವಣಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ದ.ಕ ಮತ್ತು ಉಡುಪಿ ಜಿಲ್ಲೆಗಳ ಮತದಾರರನ್ನು ಕೇಂದ್ರೀಕರಿಸಿ ಮೋದಿ ಆಗಮಿಸಲಿದ್ದು, ಸಮಾವೇಶದ ಸ್ಥಳ ಇನ್ನೂ ನಿಗದಿಯಾಗಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.