ಶಿಕ್ಷಣ ಇಲಾಖೆಯ ಮಹತ್ವದ ಸುತ್ತೋಲೆ

ಮಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ.

ಏಪ್ರಿಲ್ ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದ್ದು, ಮಗು ಹಿಂದೆ ಓದುತ್ತಿದ್ದ ಶಾಲಾ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ಹೇಳಿದೆ. ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದ್ದು ಡೊನೇಷನ್ ಪಡೆಯಬಾರದು ಎಂದು ತಿಳಿಸಲಾಗಿದೆ. ಅಲ್ಲದೆ ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದ್ದು ನಿಯಮಗಳನ್ನು ಉಲ್ಲಂಘಿಸಿದ ಶಾಲೆಗಳಿಗೆ ಒಂದು ಲಕ್ಷ ರೂಪಾಯಿ ದಂಡ, ಪುನರಾವರ್ತನೆಯದಲ್ಲಿ ದಿನಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here