ಬಾಕಿ ಉಳಿದಿದ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬಿಜೆಪಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬುಧವಾರ ರಾತ್ರಿ ಪಕ್ಷ ಪ್ರಕಟಿಸಿದೆ.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಶಾಸಕರಾಗಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್ ಎನ್ ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದೆ. ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಬಿ ವಿ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.

LEAVE A REPLY

Please enter your comment!
Please enter your name here