ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತ್ರತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದಿದ್ದು, ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದ ನಂತರದ ಬಿಜೆಪಿ ಪಕ್ಷದ ಡ್ಯಾಮೇಜ್ ಕಂಟ್ರೋಲ್ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.
ಬಿಜೆಪಿ ಲಿಂಗಾಯತ ಸಮುದಾಯದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಟಿಕೆಟ್ ನೀಡಿದೆ. ಹೆಚ್ಚಿನ ಮಂದಿಯನ್ನು ಸಚಿವರನ್ನಾಗಿ ಮಾಡಿದೆ. ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಲಿಂಗಾಯಿತ ಸಮುದಾಯದ ನಾಯಕರಿಗೆ ಉನ್ನತ ಜವಾಬ್ದಾರಿ ನೀಡಲಾಗುತ್ತದೆ. ಅಲ್ಲದೇ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯುತ ಸಮುದಾಯದವರೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ಘೋಷಣೆ ಮಾಡೋಣ ಆಗ ಡ್ಯಾಮೇಜ್ ಕಂಟ್ರೋಲ್ ಆಗುತ್ತದೆ ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ.