ಗುಂಡಿಕ್ಕಿ ಕಾಲೇಜು ಯುವತಿಯ ಹತ್ಯೆ

ಮಂಗಳೂರು : ಕಾಲೇಜು ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ 20 ವರ್ಷದ ಯುವತಿಯನ್ನು ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಜಲಾಂ ಜಿಲ್ಲೆಯಲ್ಲಿ ನಡೆದಿದೆ.

ರೋಷ್ನಿ ಆಹಿರ್ವಾರ್ ಎಂಬ ಯುವತಿಯನ್ನು ಹತ್ಯೆ ಮಾಡಲಾಗಿದ್ದು ಈಕೆ ಬಿಎ ವಿದ್ಯಾರ್ಥಿನಿ. ಪರೀಕ್ಷೆ ಬರೆದು ಮನೆಗೆ ಹಿಂದಿರುಗುತ್ತಿದ್ದಾಗ ಆಕೆಯ ಮೇಲೆ ದಾಳಿ ನಡೆದಿದೆ ಎಂದು ತಂದೆ ಮಾನ್ಸಿಂಗ್ ಹೇಳಿದ್ದಾರೆ. ಕಂಟ್ರಿ ಮೇಡ್ ಪಿಸ್ತೂಲ್ ನಿಂದ ಆಕೆಯ ತಲೆಗೆ ಗುಂಡು ಹಾರಿಸಿದ ದುಷ್ಕರ್ಮಿಗಳು ಆಯುಧವನ್ನು ಶವದ ಬಳಿ ಎಸೆದು ಪರಾರಿಯಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯ 200 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿದ್ದು ಮುಖ ಮುಚ್ಚಿಕೊಂಡ ಇಬ್ಬರು ವ್ಯಕ್ತಿಗಳು ಆಕೆಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here