ಮಂಗಳೂರು: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದ್ದರೆ ಭಾರತದ ಜನಸಂಖ್ಯೆ 142.86 ಕೋಟಿ ತಲುಪಿದೆ. 1950ರಲ್ಲಿ ಜನಸಂಖ್ಯೆಯ ಅಂಕಿ ಅಂಶಗಳನ್ನು ಸಂಗ್ರಹಿಸಲು ಆರಂಭಿಸಿದ ನಂತರ ಭಾರತವು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳ ವಿಶ್ವಸಂಸ್ಥೆಯ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವುದು ಇದೇ ಮೊದಲು.