ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಬೇಕೆಂದು ವ್ಯಕ್ತಿಯೊಬ್ಬ ಹಠ ಹಿಡಿದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಕುಳಿತ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ತರೀಕೆರೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟಿದ್ದು ಬಿಜೆಪಿಯಿಂದ ಈಗಾಗಲೇ ಡಿ ಎಸ್ ಸುರೇಶ್ ಎಂಬವರು ಕಣಕ್ಕಿಳಿದಿದ್ದಾರೆ. ಈ ನಡುವೆ ಶಿವಾನಿ ಆರ್ ಎಸ್ ಗ್ರಾಮದ ರಂಗಪ್ಪ ಎನ್ನುವ ವ್ಯಕ್ತಿ ನನಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದು ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕಾಗಮಿಸಿ ರಂಗಪ್ಪನ ಮನವೊಲಿಸಿ ಆತನನ್ನು ಕೆಳಗಿಳಿಸಿದ್ದಾರೆ. ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದಾನೆ.