ದೆಹಲಿ : ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಮೊಮ್ಮಗಳು ಹೈಕೋರ್ಟ್ ಮೆಟ್ಟಲೇರಿದ್ದಾಳೆ. ತನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಯೂಟ್ಯೂಬ್ ಚಾನೆಲ್ ವಿರುದ್ಧ ಆರಾಧ್ಯ ಕೋರ್ಟು ಮೆಟ್ಟಿಲೇರಿದ್ದಾಳೆ.
ನಟ ಅಭಿಷೇಕ್ ಐಶ್ವರ್ಯ ರೈ ಪುತ್ರಿ ಆರಾಧ್ಯೆಗೆ ಇನ್ನೂ 11 ವರ್ಷ. ಬಚ್ಚನ್ ಕುಟುಂಬದ ಕುಡಿ ಎನ್ನುವ ಕಾರಣಕ್ಕೆ ಹೆಚ್ಚು ಹೈಲೈಟ್ ಆಗುತ್ತಿದ್ದಾಳೆ. ಕೆಲವು ಯೂಟ್ಯೂಬ್ ಚಾನೆಲ್ ಗಳು ವೀವ್ಸ್ ಗಿಟ್ಟಿಸಿಕೊಳ್ಳಲು ಆರಾಧ್ಯ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದೆ. ಆರಾಧ್ಯ ಈಗ ಅಂತ ಚಾನೆಲ್ ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾಳೆ. ದೆಹಲಿ ಹೈಕೋರ್ಟ್ ನಲ್ಲಿ ತಮ್ಮ ಬಗ್ಗೆ ಈ ರೀತಿ ಸುದ್ದಿ ಪ್ರಕಟ ಆಗದಂತೆ ತಡೆ ಕೋರಿ ಮತ್ತು ಅಂತಹ ಚಾನೆಲ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾಳೆ.