ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ.

ಮೇ. 13ರ ಬುಧವಾರದಂದು ಇದೇ ಟ್ಯಾಂಕ್‌ನಿಂದ ಪರಿಸರದ ಮನೆಗಳಿಗೆ ನೀರು ಪೂರೈಕೆ ಮಾಡಲಾಗಿತ್ತು. ಪೂರೈಕೆಯಾದ ನೀರು ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು  ಪಂಚಾಯಿತ್ ಗಮನಕ್ಕೆ ತಂದಿದ್ದಾರೆ. ಪಂಚಾಯಿತ್ ಅಧಿಕಾರಿಗಳು ಟ್ಯಾಂಕ್ ಪರಿಶೀಲಿಸಿದಾಗ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿರುವುದು ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು, ಸುಮಾರು ನಾಲ್ಕು ದಿನಗಳ ಹಿಂದೆ ಈತ  ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ವಾಟ್ಸಪ್ ಮೂಲಕ ಗ್ರಾಮಸ್ಥರಿಗೆ ಸಂದೇಶ ರವಾನಿಸಿ ನೀರು ಬಳಸಿದಂತೆ ಸೂಚನೆ ನೀಡಲಾಗಿದೆ.

ಕಾಯರ್ತಡ್ಕದ ವೈನ್ ಶಾಪೊಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಮೃತ ವ್ಯಕ್ತಿ ಈತನೇ ಇರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here