ಮಂಗಳೂರು (ಬೆಂಗಳೂರು): ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಕುತೂಹಲವಾಗಿಯೇ ಉಳಿದಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಸಭೆಯ ಬಳಿಕ ಮುಖ್ಯಮಂತ್ರಿ ಹೆಸರ ಘೋಷಿಸಲಾಗುತ್ತದೆ ಎನ್ನಲಾಗಿತ್ತು. ಆದರೆ ಸಭೆ ಮುಖ್ಯ ಮಂತ್ರಿ ಆಯ್ಕೆ ವಿಚಾರವನ್ನು ಹೈ ಕಮಾಂಡ್ ತೀರ್ಮಾನಕ್ಕೆ ಬಿಟ್ಟಿದೆ. ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡಿರುವ ನಾಯಕರು ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಹಾಕಿದ್ದಾರೆ.
ಒಂದರ್ಥದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಬೆಂಗಳೂರಿನಿಂದ ದೆಹಲಿಗೆ ಶಿಫ್ಟ್ ಆಗಿದ್ದು ಪಕ್ಷದ ಪ್ರಮುಖ ನಾಯಕರು ನಾಳೆ ದೆಹಲಿಗೆ ಪ್ರಯಾಣಿಸಲಿದ್ದಾರೆ.