ಮಂಗಳೂರು: ರಾಜ್ಯದ ನೂತನ ಮುಖ್ಯ ಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ಭಾನುವಾರ ಬೆಂಗಳೂರಿನಲ್ಲಿ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ಯಾರಾಗಬೇಕೆಂಬ ಬಗ್ಗೆ ತಮ್ಮ ಅಭಿಪ್ರಾಯವನ್ನು ವೀಕ್ಷಕರಿಗೆ ತಿಳಿಸಿದ್ದು, ನಿರ್ಣಯವನ್ನು ಹೈಕಮಾಂಡ್ ಹೆಗಲಿಗೆ ಹಾಕಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಗೆ ಸೋಮವಾರ ಬುಲಾವ್ ನೀಡಿದ್ದು, ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ. ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ಎಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಇಬ್ಬರು ನಾಯಕರೊಂದಿಗೆ ಮಾತುಕತೆ ನಡೆಸಲಿದ್ದು, ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯಾರು ಎನ್ನುವ ಬಗ್ಗೆ ಘೋಷಣೆ ಮಾಡಲಿದ್ದಾರೆ.