ಮಂಗಳೂರು : ಮುಖ್ಯಮಂತ್ರಿ ಪಟ್ಟಕ್ಕಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವೆ ನಡೆಯುತ್ತಿದ್ದ ಪೈಪೋಟಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತು ವರಿಷ್ಠರು ತೆರೆ ಎಳೆದಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಿರುವ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಇಬ್ಬರು ನಾಯಕರನ್ನು ಕೂರಿಸಿಕೊಂಡು ಮಾತನಾಡುವ ಮೂಲಕ ಪೂರ್ಣಾವಧಿಗೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಆಗಿ ಮತ್ತು ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗುವಂತೆ ಮನವೊಲಿಸಿದ್ದಾರೆ. ಈ ನಿರ್ಧಾರಕ್ಕೆ ಇಬ್ಬರು ನಾಯಕರು ಒಪ್ಪಿಗೆ ಸೂಚಿಸಿದ್ದು ಇಂದು ಸಂಜೆ 7:00ಗೆ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಪ್ರಮಾಣ ವಚನ ಎಲ್ಲಿ ನಡೆಯಬೇಕು ಎನ್ನುವ ಬಗ್ಗೆ ಶಾಸಕರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.
ಶನಿವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ.