ಮೇ 20, 21 ರಂದು ಸಿ ಇ ಟಿ ಪರೀಕ್ಷೆ

    ಮಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸುವ ಸಿಇಟಿ ಪರೀಕ್ಷೆಯು ಮೇ 20 ಮತ್ತು 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

    ಮೇ.18ರಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಾರಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ. ಮೇ 20ರ ಬೆಳಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ, 21ರ ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.

    ಮೇ 22ರ ಬೆಳಗ್ಗೆ 11.30ರಿಂದ 12.30ರ ವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ  ಎಂದು ಅವರು ಹೇಳಿದ್ದಾರೆ.

    ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ ನಿಯಮಾವಳಿ ಮತ್ತು ಇತರ ಸೂಚನೆಗಳನ್ನು ತಿಳಿದುಕೊಳ್ಳಲು ಪ್ರಾಧಿಕಾರದ ಜಾಲತಾಣಕ್ಕೆ ಭೇಟಿ ನೀಡಿ… https://cetonline.karnataka.gov.in/kea/

    LEAVE A REPLY

    Please enter your comment!
    Please enter your name here