ಮಂಗಳೂರು: ದೇಶವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದ್ದ ಬಜ್ಪೆಯ ಕೆಂಜಾರು ಬಳಿ ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷ ಸಂದಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಕೂಳೂರು ತಣ್ಣೀರುಬಾವಿ ಬಳಿಯ ಉದ್ಯಾನವನದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ವಿಮಾನ ದುರಂತದಲ್ಲಿ 158 ಜನರು ಮೃತಪಟ್ಟಿದ್ದರು. 2010 ಮೇ 22 ರಂದು ಬೆಳಿಗ್ಗೆ 6:20ರ ವೇಳೆ ದುಬೈಯಿಂದ ಬಂದ ಏರ್ ಇಂಡಿಯ ಎಕ್ಸ್‌ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿಯಂತ್ರಣ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳಗೆ ಜಾರಿ ಬಿದ್ದಿತ್ತು. ಬೆಂಕಿ ಆವರಿಸಿ ಅದರಲ್ಲಿದ್ದ 158 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಎಂಟು ಮಂದಿ ಅದೃಷ್ಟವಶಾತ್ ಬದುಕುಳಿದಿದ್ದರು. ಇಂತಹ ದುರಂತಗಳು ಇನ್ನೆಂದೂ ಸಂಭವಿಸದಿರಲಿ.