ಮಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ ಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ, ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ದೇವೇಗೌಡರಿಗೆ ಸಲ್ಲಿಸಿರುವುದಾಗಿ ಹೇಳಿದರು. ಇದೇ ವೇಳೆ ಬಿಜೆಪಿ ಕಾಂಗ್ರೆಸ್ ಒಳ ಒಪ್ಪಂದದಿಂದಾಗಿ ಪಕ್ಷಕ್ಕೆ ಸೋಲಾಗಿದೆ ಎಂದು ಸಿ ಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.