ಮಂಗಳೂರು: ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿಯನ್ನು ಕಲಿಸಿದೆ. ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕರು. ನೆಹರೂ, ಇಂದಿರಾ ಗಾಂಧಿ ಎಲ್ಲರೂ ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇದಾಗಿದೆ. ಭಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಆರ್ ಎಸ್ ಎಸ್ ಮತ್ತು ಭಜರಂಗದಳವನ್ನು ನಿಷೇಧಿಸುವ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಕಟೀಲ್ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ. ಪ್ರಿಯಾಂಕ್ ಖರ್ಗೆ ನಾಲಿಗೆ ಹಿಡಿತದಲ್ಲಿಟ್ಟು ಮಾತನಾಡಲಿ ಎಂದು ಖಾರವಾಗಿ ಹೇಳಿದ ಕಟೀಲ್, ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡವ ಹಕ್ಕು ನಿಮಗಿಲ್ಲ.
ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಎಂದು ಕಾಂಗ್ರೆಸ್ ನವರೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿ ಮಾಡಿದ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಲಿ. ರಾಜ್ಯದಲ್ಲಿ ದ್ವೇಷ, ವಿಭಜನೆ ಮೂಲಕ ಕಾಂಗ್ರೆಸ್ ಆಡಳಿತ ಮಾಡುತ್ತಿದೆ. ಮಂತ್ರಿ ಮಂಡಲದ ಗಲಾಟೆಯಲ್ಲೇ ಕಾಂಗ್ರೆಸ್ ವಿಭಜನೆಯಾಗಲಿದೆ. ಇದರ ಭಯದಲ್ಲಿ ಆರ್.ಎಸ್ ಎಸ್ ಹೆಸರು ಹೇಳ ಕಾಂಗ್ರೆಸ್ ಗಟ್ಟಿ ಮಾಡುತ್ತಿದ್ದಾರೆ. ಇವರ ಆಂತರಿಕ ಜಗಳ ಹೊರ ಬಾರದಂತೆ ಮಾಡಲು ಇದೊಂದು ಷಡ್ಯಂತ್ರವಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.