ಮಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ 24 ಸಚಿವರು ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಡ್ ಪ್ರತಿಜ್ಞಾವಿಧಿ ಬೋಧಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಭಾಪತಿಯು ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಇಂದು ಹೆಚ್ ಕೆ ಪಾಟೀಲ್, ಕೃಷ್ಣ ಬೈರೇಗೌಡ, ಎನ್ ಚೆಲುವರಾಯ ಸ್ವಾಮಿ, ಕೆ ವೆಂಕಟೇಶ್, ಡಾ.ಎಚ್ ಸಿ ಮಹದೇವಪ್ಪ, ಈಶ್ವರ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ್, ಎಸ್ ಎಸ್ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್ ಎಸ್ ಬೋಸರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ ಸಿ ಸುಧಾಕರ್, ಬಿ ನಾಗೇಂದ್ರ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್, ಡಾ.ಸುಧಾಕರ್ ಪ್ರತಿಜ್ಞಾವಿಧಿ ಸ್ವೀಕರಿಸಿದರು.