ಮಂಗಳೂರು: ಮೂಡುಶೆಡ್ಡೆ ಗ್ರಾಮದ ಫಲ್ಗುಣಿ ನದಿಯ ಅಧ್ಯಾಪಾಡಿ ಡ್ಯಾಂ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಕನ ಹಳ್ಳಿ ನಿವಾಸಿ ಶಾಹಿಲ್(19) ಮತ್ತು ಮಂಗಳೂರು ಸೋಮೇಶ್ವರ ನೇತಾಜಿ ರಸ್ತೆ ಸಂಕೋಲಿಗೆ ನಿವಾಸಿ ಮನ್ಸೂರ್(21) ಎಂದು ಗುರುತಿಸಲಾಗಿದೆ. ಬಂಧಿತರಿಂದ 3 ಲಕ್ಷ ರೂಪಾಯಿ ಮೌಲ್ಯದ 10.125ಕೆಜಿ ಗಾಂಜಾ ವಶಪಡಿಸಿಕೊಂಡ ಕಾವೂರು ಠಾಣೆಯ ಪೊಲೀಸ್ ನಿರೀಕ್ಷಕರಾದ ಗುರುರಾಜ್ ನೇತ್ರತ್ವದ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದೆ.