



ಮಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ಅವರನ್ನು ನೇಮಕ ಮಾಡಲಾಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.






ರಾಣಿಬೆನ್ನೂರು ಮೂಲದವರಾದ ಬಿ.ದಯಾನಂದ್ ಈ ಹಿಂದೆ ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಕಮೀಷನರ್ ಆಗಿ ಸೇವೆ ಸಲ್ಲಿಸಿದರು. ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಯಾಗಿ ಕೆಲಸ ನಿರ್ವಿಹಿಸುತ್ತಿದ್ದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ವರ್ಗಾಯಿಸಲಾಗಿದೆ. ಪುತ್ತೂರು ಉಪ ವಿಭಾಗದ ಎಎಸ್‌ಪಿ ಯಾಗಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಅವರು ಸೇವೆ ಸಲ್ಲಿಸಿದರು.














