ಒಡಿಸ್ಸಾದ ಬಾಲಾಸೋರ್ ನಲ್ಲಿ ಭೀಕರ ರೈಲು ದುರಂತ – ಸಾವಿನ ಸಂಖ್ಯೆ 280ಕ್ಕೆ

ಮಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ 280ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಹಾನಗರ್ ರೈಲು ನಿಲ್ದಾಣದ ಬಳಿ ಶಾಲಿಮಾರ್, ಚೆನ್ನೈ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಅದೇ ಹಳಿಯಲ್ಲಿ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮೂರು ಸ್ಲೀಪರ್ ಕೋಚ್ ಹೊರತು ಪಡಿಸಿ ಉಳಿದ 18 ಬೋಗಿಗಳು ಹಳಿ ತಪ್ಪಿ ಮತ್ತೊಂದು ಹಳಿಯ ಮೇಲೆ ಬಿದ್ದಿದೆ. ಅಷ್ಟರಲ್ಲೇ ವಿರುದ್ಧ ದಿಕ್ಕಿನಲ್ಲಿ ಬಂದ ಬೆಂಗಳೂರಿನಿಂದ ಹೌರಾಗೆ ತೆರಳುತ್ತಿದ್ದ ರೈಲು ಹಳಿಗಳ ಮೇಲೆ ಬಿದ್ದಿದ್ದ ಬೋಗಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೆಂಗಳೂರು ಯಶವಂತಪುರ ಹೌರಾ ರೈಲಿನ ಮೂರರಿಂದ ನಾಲ್ಕು ಭೋಗಿಗಳು ಹಳಿತಪ್ಪಿ ಬಿದ್ದಿದೆ. ದುರಂತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿದ್ದು ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here