- ಮಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿ ಪಡಿಸಿರುವ ಪ್ರೋತ್ಸಾಹ ಧನದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿಕೊಳ್ಳಬೇಕು. ಏಕಾಏಕಿ ದರ ಕಡಿತ ಮಾಡುವಂತಿಲ್ಲ ಈ ಕುರಿತು ಸರಕಾರದ ಜತೆ ಚರ್ಚಿಸಬೇಕು ಎಂದು ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ.