ಮಂಗಳೂರು: ಮುಂದಿನ ಮೂರು ದಿನಗಳಲ್ಲಿ ಪಕ್ಷವು ಕರ್ನಾಟಕ ವಿಧಾನಸಭೆಗೆ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ತಿಂಗಳು ಕಳೆದರೂ ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಈಗಾಗಲೇ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಬೇಕಾಗಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದರಿಂದ ತಡವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.