ಮಂಗಳೂರು: ರಾಜ್ಯದ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 806 ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.450 ಸಹಾಯಕರು,350 ಅಧಿಕಾರಿಗಳು ಹಾಗೂ ಕಾನೂನು ಅಧಿಕಾರಿಗಳ ಸಹಿತ 806 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಈ ನೇಮಕಾತಿ ನಡೆಸುತ್ತಿದೆ. ವಿದ್ಯಾರ್ಹತೆ – ಯಾವುದೇ ಪದವಿ ಆಫೀಸರ್- ಬ್ಯಾಂಕಿಂಗ್, ಕೃಷಿ, ಹಣಕಾಸು, ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ, ಪಶು ವೈದ್ಯಕೀಯ ವಿಜ್ಞಾನ, ಕೃಷಿ ಇಂಜಿನಿಯರಿಂಗ್ ವಿಷಯದಲ್ಲಿ ಕನಿಷ್ಠ 50 ಶೇಕಡಾ ಅಂಕದೊಂದಿಗೆ ಪದವಿ. ಲಾ ಆಫೀಸರ್ – ಕನಿಷ್ಠ ಐವತ್ತು ಶೇಕಡ ಅಂಕದೊಂದಿಗೆ ಕಾನೂನು ಪದವಿ, ಎರಡು ವರ್ಷದ ಅನುಭವ. ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಹಾಗೂ ಆಫೀಸರ್ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ಕೈಬರಹದ ಪ್ರಮಾಣ ಪತ್ರವನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ಅಭ್ಯರ್ಥಿಯು ಬ್ಯಾಂಕ್ ಖಾತೆ ಹೊಂದಿರಬೇಕು, ಕ್ರೆಡಿಟ್ ಸ್ಕೋರ್ ಚೆನ್ನಾಗಿರಬೇಕು, ನೇಮಕವಾಗುವ ಸಮಯದಲ್ಲಿ ಸಿಬಿಲ್ ಸ್ಕೋರ್ 650 ಅಥವಾ ಅದಕ್ಕಿಂತ ಹೆಚ್ಚಿರಬೇಕು. ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನಾಂಕ .ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು www.ibps.in ಈ ವೆಬ್ ಸೈಟ್ ನಲ್ಲಿ ನೋಡಬಹುದು.