ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಎಂಬವರು ಜೂನ್ 8ರಂದು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಬಾಲಕೃಷ್ಣ ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಹೃದಯ ಮತ್ತು ಕರುಳಿನ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.