ಖಾಲಿ ಇರುವ 58000 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ – ಮಧು ಬಂಗಾರಪ್ಪ

ಮಂಗಳೂರು : ಸರಕಾರಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಕಾಲಮಿತಿ ಒಳಗೆ ಕ್ರಮ ಕೈಗೊಳ್ಳಲಾಗುವುದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ಹಿಂದಿನ ಸರಕಾರದ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿದ್ದ 15000 ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾದ 13,351 ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿತ್ತು, ಕೆಲವರು ಮತ್ತೆ ಕೋರ್ಟು ಮೊರೆ ಹೋಗಿದ್ದು ಸ್ಥಳ ನಿಯೋಜನೆ ಆದೇಶ ನೀಡಲು ವಿಳಂಬವಾಗಿದೆ. ಕಾನೂನು ನೆರವು ಪಡೆದು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಪ್ರತಿಭಾವಂತ ಶಿಕ್ಷಕರು ಇಲಾಖೆಯ ಶಕ್ತಿ. ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡರೂ ಅದು ತಾತ್ಕಾಲಿಕ ಪರಿಹಾರವಷ್ಟೇ. ಅದಕ್ಕಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲೇಬೇಕಿದೆ. ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

LEAVE A REPLY

Please enter your comment!
Please enter your name here