ವೃಕ್ಷಮಾತೆ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ಮಂಗಳೂರು: ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಅಂಕೋಲಾ ತಾಲೂಕಿನ ಹೊನ್ನಳ್ಳಿಯ ಹಾಲಕ್ಕಿ ಸಮುದಾಯದ ಪದ್ಮಶ್ರೀ ತುಳಸಿ ಗೌಡ ಅವರು ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪದವಿ ಘೋಷಿಸಲಾಗಿದೆ.

ಜೂನ್ 16ರಂದು ನಡೆಯುವ ಕೃಷಿ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವದಲ್ಲಿ ವೃಕ್ಷ ಮಾತೆ ಖ್ಯಾತಿಯ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ವಿವಿ ತಿಳಿಸಿದೆ.

LEAVE A REPLY

Please enter your comment!
Please enter your name here