ಗಡಿಯಲ್ಲಿ ಪಾಕ್ ಬಲೂನ್ ಪತ್ತೆ ಸೇನೆಯಿಂದ ಶೋಧ ಕಾರ್ಯ ಆರಂಭ

ಮಂಗಳೂರು(ಶ್ರೀನಗರ): ಪಾಕಿಸ್ತಾನದ ಅಂತರಾಷ್ಟ್ರೀಯ ಏರ್ಲೈನ್ಸ್ ಲಾಂಛನವಿರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಕಪ್ಪು ಬಿಳುಪು ಬಣ್ಣದ ನಿಗೂಢ ಬಲೂನ್ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಭದ್ರತಾ ಪಡೆಗಳು ಅದನ್ನು ವಶಪಡಿಸಿಕೊಂಡಿದ್ದು, ಬಲೂನ್ ಎಲ್ಲಿಂದ ಬಂದಿದೆ ಎಂದು ತನಿಖೆ ಮಾಡಲು ಸೇನೆಯಿಂದ ಶೋಧ ಕಾರ್ಯ ಆರಂಭವಾಗಿದೆ. ಕಳೆದ ಫೆಬ್ರವರಿಯಲ್ಲಿ ಇದೇ ರೀತಿಯ ವಿಮಾನದ ಆಕಾರದ ಹಸಿರು ಮತ್ತು ಬಿಳಿ ಬಣ್ಣದ ಬಲೂನ್ ಶಿಮ್ಲಾದಲ್ಲಿ ಪತ್ತೆಯಾಗಿತ್ತು. ಪಿಐಎ ಲೋಗವನ್ನು ಮುದ್ರಿಸಲಾಗಿತ್ತು. ಮೇ.20ರಂದು ಅಮೃತಸರದಲ್ಲಿ ಮಾದಕ ವಸ್ತುಗಳನ್ನು ಹೊಂದಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಸೇನೆ ಹೊಡೆದುರುಳಿಸಿತ್ತು.

LEAVE A REPLY

Please enter your comment!
Please enter your name here