ಮಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.
ಶಕ್ತಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡನ್ನು ವಿತರಿಸಲಾಯಿತು.