



ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಸುಮತಿ ಹೆಗಡೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.







ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಜೆಡಿಎಸ್ ಪಕ್ಷಕ್ಕಾಗಿ ಕಳೆದ ಮೂರು ವರ್ಷಗಳಿಂದ ಹಗಲಿರುಳು ದುಡಿದಿದ್ದೇನೆ, ನನ್ನ ಸ್ವಂತ ಖರ್ಚಿನಿಂದ ಜನರ ಸೇವೆ ಮಾಡಿರುವ ಬಗ್ಗೆ ಹೆಮ್ಮೆ ಇದೆ, ಆದರೆ ಪಕ್ಷದ ಕಾರ್ಯವೈಖರಿ ಅಸಹಕಾರದಿಂದ ಮನನೊಂದಿದ್ದೇನೆ. ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಲ್ತಾಫ್ ತುಂಬೆ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.














