ಮಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲವೆಡೆ ಬಿರುಸಿನ ಮಳೆಯಾಗಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಂಭವವಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು ಈ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಕರಾವಳಿಯಲ್ಲಿ 40 ರಿಂದ 45 km ನಿಂದ 55km ವೇಗದಲ್ಲಿ ಗಾಳಿ ಬೀಸುವ ವಾತಾವರಣ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.