ಮಂಗಳೂರು: ಆಸ್ತಿ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಹಾಲಿ ಇರುವ ಭೂಮಿಯ ಮಾರ್ಗಸೂಚಿ ಬೆಲೆಯನ್ನು ಶೇಕಡ 20 ರಿಂದ 25ರಷ್ಟು ಹೆಚ್ಚಳ ಮಾಡುವಂತೆ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಶೀಘ್ರದಲ್ಲಿಯೇ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲು ಇಲಾಖೆಯ ಅಧಿಕಾರಿಗಳು ಸಜ್ಜಾಗಿದ್ದಾರೆ ಎನ್ನಲಾಗಿದೆ. ಸರಕಾರ ಇದಕ್ಕೆ ಒಪ್ಪಿಗೆ ಸೂಚಿಸಿದಲ್ಲಿ ಮಾರ್ಗಸೂಚಿ ಬೆಲೆಯಲ್ಲಿ ಏರಿಕೆಯಾಗಲಿದೆ. ಪರಿಣಾಮ ಮುದ್ರಾಂಕ ಮತ್ತು ನೋಂದಣಿ ಶುಲ್ಕಗಳು ಏರಿಕೆಯಾಗಲಿವೆ. ಪ್ರತಿ ವರ್ಷ ಭೂಮಿಯ ಮಾರ್ಗಸೂಚಿ ದರ ಹೆಚ್ಚಳ ಮಾಡಲು ಅವಕಾಶವಿದೆ. ಆದರೆ ಕೋವಿಡ್ ಕಾರಣದಿಂದ 2019 ರಿಂದ ಮಾರ್ಗಸೂಚಿ ದರ ಹೆಚ್ಚಳವಾಗಿರಲಿಲ್ಲ.