ಅಕ್ಕಿ ನೀಡದ ಕೇಂದ್ರ ಸರಕಾರ – ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ಭಾರತೀಯ ಆಹಾರ ನಿಗಮ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಸವಾಲು ಹಾಕಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ಎಫ್‌ಸಿಐ ಕಮಿಟ್‌ಮೆಂಟ್ ಪತ್ರವನ್ನು ಟ್ವಿಟರ್ ನಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿಗಳು, ಸಿ.ಟಿ ರವಿ ಅವರೇ ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ಎಂದು ಬರೆದುಕೊಂಡಿದ್ದಾರೆ.ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಹೇಳಿದ್ದಾರೆ. ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಕಿಡಿಕಾರಿದ್ದಾರೆ.

ಟ್ವೀಟ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here