ಗೃಹಲಕ್ಷ್ಮಿ ಯೋಜನೆ ಆಗಸ್ಟ್ 18 ರೊಳಗೆ ಖಾತೆಗೆ ಹಣ ಹಾಕುವುದು ಖಚಿತ – ಲಕ್ಷ್ಮಿ ಹೆಬ್ಬಾಳ್ಕರ್

ಮಂಗಳೂರು: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ ಆಗಸ್ಟ್ 18ರ ಒಳಗೆ ಮನೆ ಹೆಂಡತಿಯ ಬ್ಯಾಂಕ್ ಖಾತೆಗೆ ಹಣ ಹಾಕುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು, ಆಗಸ್ಟ್ 18ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ಸಂದಾಯ ಮಾಡುವುದು ಖಚಿತ. ಆದರೆ ಅರ್ಜಿ ಸಲ್ಲಿಕೆ ಮಾತ್ರ ಸ್ವಲ್ಪ ತಡವಾಗಲಿದೆ. ಅಗಸ್ಟ್ 17 ಅಥವಾ 18ಕ್ಕೆ ಖಂಡಿತ ಹಣ ಖಾತೆ ಸೇರುತ್ತದೆ ಎಂದು ಅವರ ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತಿರುವುದರಿಂದ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿದೆ ಅಷ್ಟೇ, ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಅಧಿಕಾರಿಗಳಿಗೆ ಕೆಲವು ಬದಲಾವಣೆಗಳ ಕುರಿತು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಮೊದಲು ಗ್ರಾಮವನ್ ಕರ್ನಾಟಕ, ಬೆಂಗಳೂರು ವನ್ ನಲ್ಲಿ ಇದರ ಸೇವೆ ಪಡೆಯಬಹುದಾಗಿತ್ತು. ಆದರೆ ಈಗ ಬಾಪೂಜಿ ಸೇವ ಕೇಂದ್ರವನ್ನು ಸೇರಿಸಿದ್ದೇವೆ. ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಇರಲಿದೆ. ಸರಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರುವವರನ್ನು ಪ್ರಜಾಪ್ರತಿನಿಧಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here