ಮಂಗಳೂರು : ಇಲ್ಲಿನ ವಿಜಯನಗರದ ಮನೆಯೊಂದರಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿದ್ದು, ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ.
ಕಮಲಮ್ಮ ಎಂಬ ಮಹಿಳೆಯನ್ನು ಮನೆಯಲ್ಲಿ ಬೇರೆ ಯಾರು ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿರುವ ಮಲ್ಲಿಕಾರ್ಜುನ ಅವರ ಪತ್ನಿ. ಮಲ್ಲಿಕಾರ್ಜುನ ಅವರು ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದು ಶನಿವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಕೃತ್ಯ ಮಾಡಲಾಗಿದೆ. ಮಲ್ಲಿಕಾರ್ಜುನ ಅವರು ಪತ್ನಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅಕ್ಕಪಕ್ಕದವರಿಗೆ ಕರೆ ಮಾಡಿದ್ದಾರೆ. ಪಕ್ಕದ ಮನೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.