ಪುಣೆ – ಅಗ್ನಿ ಅವಘಡ – 20 ಗೋಡೌನ್‌ ಭಸ್ಮ

ಮಂಗಳೂರು (ಪುಣೆ): ಮಹಾರಾಷ್ಟ್ರದ ಪುಣೆ ನಗರದ ಕೊಂಧ್ವಾ ರೋಡ್ ಪ್ರದೇಶದಲ್ಲಿ ರವಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಿಸ್ಕೆಟ್‌ಗಳು, ಪೀಠೋಪಕರಣಗಳು ಮತ್ತು ವಿದ್ಯುತ್ ಸಾಮಗ್ರಿಗಳು ಸೇರಿದಂತೆ ವಿವಿಧ ವಸ್ತುಗಳನ್ನು ಇರಿಸಲಾಗಿದ್ದ ಸುಮಾರು 20 ಗೋಡೌನ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇಪ್ಪತ್ತೆರಡು ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ನಿಯೋಜಿಸಲಾಗಿತ್ತು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here