ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ – ವೀಡಿಯೊ ವೈರಲ್

ಮಂಗಳೂರು(ಹಾಸನ): ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹೊಳೆನರಸೀಪುರ ತಾಲೂಕಿನ, ಮಳಲಿ ದೇವಸ್ಥಾನದ ಬಳಿ ಜೂ.17 ರಂದು ನಡೆದಿದ್ದು, ಈ ಕುರಿತ ಸಿಸಿ ಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹೊಳೆನರಸೀಪುರ ತಾಲೂಕಿನ ಕುಂದೂರು ಹೋಬಳಿ ಎಸ್.ಹೊನ್ನೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಪ್ರಸ್ತುತ ಸಕಲೇಶಪುರ ತಾಲೂಕು ಯಸಳೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ ಟೇಬಲ್ ಆಗಿರುವ ಶರತ್ ಹಲ್ಲೆಗೊಳಗಾದವರು.

ಜೂ.15 ರಂದು ಸಾಂದರ್ಭಿಕ ರಜೆ ಪಡೆದು ಸ್ನೇಹಿತನ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆಂದು ಮಳಲಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಸನ್ ಹಾಲ್ ಮುಂಭಾಗ ಗ್ರಾಮದ ಯುವಕರ ಗುಂಪೊಂದು ಚೇತನ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿದ್ದಾಗ ಈ ವೇಳೆ ಜಗಳ ಬಿಡಿಸಲು ಶರತ್ ಹೋಗಿದ್ದಾರೆನ್ನಲಾಗಿದೆ. ಈ ವೇಳೆ ಶರತ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಿಥುನ್, ಲೋಹಿತ್, ನಟರಾಜು ಹಾಗೂ ಇತರರು ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಕಾರಿನಲ್ಲಿದ್ದ ಮಾರಕಾಸ್ತ್ರವನ್ನು ತಂದು ಶರತ್ ಮೇಲೆ ಮುಗಿಬಿದ್ದಿದ್ದಾರೆ. ಗುಂಪಿನಿಂದ ತಪ್ಪಿಸಿಕೊಂಡ ಶರತ್, ತಕ್ಷಣ ಕನ್ವೆನ್ಷನ್ ಹಾಲ್ ಒಳಗ ಓಡಿ ಹೋಗಿದ್ದಾರೆ. ನಂತರ ಅಲ್ಲಿಗೂ ತೆರಳಿದ ಗುಂಪು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿದೆ. ಪರಿಣಾಮ ಹಾಲ್‌ನಲ್ಲೇ ಕಾನ್ಸ್‌ಟೇಬಲ್ ಶರತ್ ಕುಸಿದು ಬಿದ್ದಿದ್ದಾರೆ.

ಸದ್ಯ ಶರತ್ ಅವರು ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ಪಡೆಯುತ್ತಿದ್ದು, ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here