ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್ – 2023 ಪ್ರಶಸ್ತಿ ಗೆದ್ದ ತುಳುನಾಡ ಟೈಗರ್ಸ್ ತಂಡ

ಮಂಗಳೂರು (ದುಬೈ): ದುಬೈನ ಶಬಾಬ್ ಅಲ್ ಅಹ್ಲಿ ಕ್ರೀಡಾಂಗಣದಲ್ಲಿ ಡಾ. ರಾಜ್ ಕಪ್ ಆರನೇ ಆವೃತ್ತಿಯ ಪೂರ್ವಸಿದ್ಧತಾ ಕಾರ್ಯಕ್ರಮದ ಅಂಗವಾಗಿ ನಡೆದ ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್ ಪಂದ್ಯಕೂಟವನ್ನು ರಫೀಕ್ ದರ್ಬಾರ್ ಮಾಲೀಕತ್ವದ ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕನ್ನಡ, ತುಳು, ತಮಿಳು, ತೆಲುಗು, ಮಲಯಾಳಂ ಸಿನಿಮಾ ಮತ್ತು ಕಿರುತೆರೆಯ 40ಕ್ಕೂ ಹೆಚ್ಚು ಕಲಾವಿದರ ಆರು ತಂಡಗಳ ನಡುವೆ ನಡೆದ ಪಂದ್ಯಾಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಫೈನಲ್ ಪಂದ್ಯದಲ್ಲಿ ನಾಯಕ ಲೂಸ್ ಮಾದ ಯೋಗಿ ನೇತೃತ್ವದ ಸಮೃದ್ಧಿ ಬೆಂಗಳೂರು ತಂಡವನ್ನು ವಸಿಷ್ಠ ಸಿಂಹ ನೇತೃತ್ವದ ತುಳುನಾಡ ಟೈಗರ್ಸ್ ತಂಡವು ಸೋಲಿಸಿ ಸೆಲೆಬ್ರಿಟಿ ಬಾಕ್ಸ್ ಕ್ರಿಕೆಟ್- 2023 ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

LEAVE A REPLY

Please enter your comment!
Please enter your name here