ಮಂಗಳೂರು (ಬೆಂಗಳೂರು): ರಾಜ್ಯದಲ್ಲಿ ವಿದ್ಯುತ್ ದರ ತೀವ್ರ ಹೆಚ್ಚಳದ ವಿರುದ್ಧ ಉದ್ಯಮಿಗಳ ಕೆಸಿಸಿಐ ಹೋರಾಟಕ್ಕೆ ಬಿಜೆಪಿಯ ನೈತಿಕ ಬೆಂಬಲ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯಕಾರಿಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಿದ್ಯುತ್ ಬಿಲ್ ನಲ್ಲಿ ವಂಚನೆ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ ಕೈಗಾರಿಕಾ ವಾಣಿಜ್ಯ ಮಂಡಳಿ ಕಾಸಿಯ ಹೋರಾಟ ಬಂದ್ ಗೆ ಕರೆ ಕೊಟ್ಟಿದೆ. ಕಳೆದ 15 20 ದಿನಗಳಿಂದ ರಾಜ್ಯದ ಜನರ ಬಾಯಿಯಲ್ಲಿ ವಿದ್ಯುತ್ ಬಿಲ್ಕೊಟ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾನ್ಯ ಜನರಿಗೂ 2 ಸಾವಿರದ ಬದಲು 6 ರಿಂದ 8 ಸಾವಿರದ ಬಿಲ್ ಬರುತ್ತಿದೆ. ಕೆಲವೆಡೆ 7 ರಿಂದ 8 ಲಕ್ಷದ ಬಿಲ್ ವಿಧಿಸಿದ್ದಾರೆ. 20 ಸಾವಿರ ಬಿಲ್ ಬರುವ ಉದ್ಯಮಿಗೆ 1 ಲಕ್ಷದ ಬಿಲ್ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಈ ರಾಜ್ಯದ ಉದ್ಯಮಿಗಳಿಗೆ ಅವಕಾಶಗಳನ್ನು ಕೊಡಬೇಕು. ಅವರ ಸಮಸ್ಯೆಗಳನ್ನು ಆಲಿಸಿ ನ್ಯಾಯ ಕೊಡಬೇಕು ಎಂದು ಕಟೀಲ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಹಕಾರ ಇದೆ. ಆದರೆ ಜನ ವಿರೋಧಿ ನಿರ್ಧಾರಗಳ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದ ಅವರು 22 ರಿಂದ ಪಕ್ಷದ ನಾಯಕರ ಜಿಲ್ಲಾ ಪ್ರವಾಸ ಆರಂಭವಾಗಲಿದೆ ಎಂದು ಹೇಳಿದರು.
ಈ ನಡುವೆ ವಿದ್ಯುತ್ ದರ ಏರಿಕೆ ವಿರೋಧಿಸಿ ಜೂ.22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿಲ್ಲ ಎಂದು ಎಫ್.ಕೆ.ಸಿ.ಸಿ.ಐ ಅಧ್ಯಕ್ಷ ಬಿ ವಿ ಗೋಪಾಲ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ನಮಗೂ ಕರ್ನಾಟಕ ಬಂದಿಗೂ ಸಂಬಂಧ ಇಲ್ಲ. ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವರೊಂದಿಗೆ ಮಾತುಕತೆ ನಡೆಸಿ ತೆರಿಗೆಯನ್ನು ಶೇ.9 ರಿಂದ 3ಕ್ಕೆ ಇಳಿಸಲು ಮನವಿ ಮಾಡಿದ್ದೇವೆ. ಸರಕಾರ ಏನು ಮಾಡಲಿದೆ ಎಂಬುವುದನ್ನು ಕಾದು ನೋಡುತ್ತೇವೆ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್, ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಬೆಂಬಲ ಇರುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದೆ.