ಬಸ್ ಚಾಲಕನ ಸಮಯ-ಪ್ರಜ್ಞೆ – ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ 

ಮಂಗಳೂರು(ಉಳ್ಳಾಲ): ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.ಚಾಲಕನ ಸಮಯಪ್ರಜ್ಞೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here