ಮಂಗಳೂರು(ಬೆಂಗಳೂರು): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ರಾತ್ರಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಪಾರ್ವತಿ ಅವರಿಗೆ ಎಂಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಜ್ವರದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದರು.
ಪತ್ನಿ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದಲ್ಲಿ ಬದಲಾವಣೆ ಆಗಿದೆ. ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 11.30 ಗಂಟೆಗೆ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಸಿದ್ದರಾಮಯ್ಯ ಅವರು ವಿಳಂಬವಾಗಿ ದೆಹಲಿಗೆ ತೆರಳಲಿದ್ದಾರೆ.