ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ – ಸರಕಾರದ ಸುತ್ತೋಲೆ

ಮಂಗಳೂರು(ಬೆಂಗಳೂರು): ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿಯ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಮುಂದಿನ ಆದೇಶದವರೆಗೆ ವಿತರಿಸುವಂತೆ ಸರಕಾರವು ಶಾಲಾ ಮುಖ್ಯಶಿಕ್ಷಕರಿಗೆ ತಿಳಿಸಿದೆ.

ಈ ಕುರಿತು ರಾಜ್ಯ ಸರಕಾರವು ಸುತ್ತೋಲೆಯನ್ನು ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ರಕ್ತಹೀನತೆ ನಿವಾರಣೆಗಾಗಿ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ ಒಂದು ದಿನ ನೀಡುವಂತೆ ತಿಳಿಸಲಾಗಿದೆ. ಮೊಟ್ಟೆಯೊಂದಕ್ಕೆ 6 ರೂ.ಗಳನ್ನು ನಿಗಧಿಪಡಿಸಿದೆ.

ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದಲ್ಲಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here