ಮಂಗಳೂರು(ಬೆಂಗಳೂರು): ಕೇಂದ್ರ ಸರಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಅನುಗುಣವಾಗಿ ರಾಜ್ಯ ಸರ್ಕಾರಗಳು ಸಲ್ಲಿಸುವ ಮನವಿಗೆ ಪೂರಕವಾಗಿ ಸ್ಪಂದಿಸಬೇಕು. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಕ್ಕೆ ಅಗತ್ಯ
ಅಕ್ಕಿಯನ್ನು ಕೂಡಲೇ ಪೂರೈಕೆ ಮಾಡಬೇಕು ಎಂದು ಸಮಾನ ಮನಸ್ಕರ ಒಕ್ಕೂಟ-ಕರ್ನಾಟಕ ಆಗ್ರಹಿಸಿದೆ.
ಈ ಸಂಬಂಧ ಹಿರಿಯ ಸಾಹಿತಿಗಳಾದ ಡಾ. ಕೆ ಮರುಳಸಿದ್ದಪ್ಪ, ಪ್ರೊ. ಎಸ್ ಜಿ ಸಿದ್ದರಾಮಯ್ಯ, ಡಾ. ನಿರಂಜನಾರಾಧ್ಯ ವಿ ಪಿ, ದಿನೇಶ್ ಅಮೀನ್ ಮಟ್ಟು ಸೇರಿದಂತೆ ಇನ್ನಿತರರು ಪ್ರಕಟಣೆ ನೀಡಿದ್ದು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ 2030ರ ವೇಳೆಗೆ ಹಸಿವು ಮುಕ್ತ ಜಗತ್ತನ್ನು ಸೃಷ್ಟಿಸುವ ಗುರಿ ಹೊಂದಿದೆ. 720 ರಿಂದ 811 ಮಿಲಿಯನ್ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಹಾಗೆಯೇ 2.4 ಶತಕೋಟಿ ಜನರು ತೀರ್ವವಾಗಿ ಆಹಾರ ಅಭದ್ರತೆಯಿಂದ ಬಳಲುತ್ತಿದ್ದಾರೆ.
ಕೇಂದ್ರ ಸರ್ಕಾರವು ಸಂವಿಧಾನದ ಘನತಂತ್ರ ಹಾಗೂ ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ ಭಾರತವನ್ನು ವಿಶ್ವಾಸ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ 2ರ ಅನ್ವಯ ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರಕಾರವನ್ನು ಅಭಿನಂದಿಸಿ, ಸರಕಾರ ಸಲ್ಲಿಸಿರುವ ಬೇಡಿಕೆಯನ್ನು ಈಡೇರಿಸುವ ಮೂಲಕ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಯನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.